ಪುತ್ತೂರು : ಭೀಕರ ಅಪಘಾತ- 10ಕ್ಕೂ ಹೆಚ್ಚು ವಾಹನಗಳಿಗೆ ಹಾನಿ
ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ.
ಪಾಣಾಜೆ – ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಟೈರ್ ಪಂಕ್ಚರ್ ಆಗಿ ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.
ಸಂಟ್ಯಾರ್ ಜಂಕ್ಷನ್ ನಲ್ಲಿ ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.
ಅಪಘಾತದಲ್ಲಿ ಯಾವೂದೇ ಅನಾಹುತ ನಡೆದಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಸಂಪ್ಯ ಪೊಲೀಸರು ಸ್ಥಳಕ್ಕೆ ದಾವಿಸಿದ್ದಾರೆ.





