ಅಪಾರ್ಟ್‍ಮೆಂಟ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ
ಲಕ್ನೋ: ಭಾರತೀಯ ಕಂದಾಯ ಇಲಾಖೆಯ ಅಧಿಕಾರಿ ಸೌರಭ್ ಮೀನಾ ಅವರ ನೋಯ್ಡಾದ ಅಪಾರ್ಟ್‍ಮೆಂಟ್‍ನಲ್ಲಿ ಯುವತಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್‍ನ (ಬಿಹೆಚ್‍ಇಎಲ್) ಮಾನವ ಸಂಪನ್ಮೂಲ ಅಧಿಕಾರಿ ಶಿಲ್ಪಾ ಗೌತಮ್ ಎಂದು ಗುರುತಿಸಲಾಗಿದೆ.
ಶಿಲ್ಪಾ ಹಾಗೂ ಸೌರಭ್ ಕಳೆದ ಮೂರು ವರ್ಷಗಳಿಂದ ಸಂಬಂಧ ಹೊಂದಿದ್ದರು. ಅವರು ಡೇಟಿಂಗ್ ಅಪ್ಲಿಕೇಶನ್ ಮೂಲಕ ಪರಿಚಯವಾಗಿದ್ದು, ಸೌರಭ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ.




