March 17, 2026

ರಘುಪತಿ ಭಟ್ ಗೆಲ್ಲುತ್ತೇನೆ ಎಂಬ ಭ್ರಮೆನಲ್ಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯ

0
image_editor_output_image758183664-1716883449959.jpg

ಉಡುಪಿ: ರಘುಪತಿ ಭಟ್ ಅವರಿಗೆ ಪಕ್ಷದಿಂದ ಯಾವುದೇ ಅನ್ಯಾಯ ಆಗಿಲ್ಲ. ಸಾಕಷ್ಟು ಬಾರಿ ಅವಕಾಶ ಸಿಕ್ಕಿದೆ. ಇನ್ನೂ ಅನೇಕರಿಗೆ ಅವಕಾಶ ಸಿಗಬೇಕಾಗಿದೆ. ಅವಕಾಶ ಸಿಕ್ಕವರಿಗೆ ಮತ್ತೆ ಅವಕಾಶ ಸಿಗಬೇಕೆಂಬುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮೇ 27ರಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುಪತಿ ಭಟ್ ಗೆತ್ತೇನೆ ಎಂಬ ಭ್ರಮೆನಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಆದರೆ, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರರು ಆಶೀರ್ವಾದ ಮಾಡುತ್ತಿದ್ದಾರೆ. ಮೊದಲ ಬಾರಿ ಸ್ಪರ್ಧಿಸುತ್ತಿದ್ದರೂ ಓರ್ವ ಸಜ್ಜನ ರಾಜಕಾರಣಿ ಎಂದು ಜನ ಮಾತನಾಡುತ್ತಿದ್ದಾರೆ. ಬಿಜೆಪಿ ಪಕ್ಷ, ಸಂಘಟನೆ ಬಲಿಷ್ಠವಾಗಿದೆ. ಧನಂಜಯ್ ಸರ್ಜಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದರು.

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಅಭ್ಯರ್ಥಿ ಎಸ್‌. ಎಲ್‌. ಭೋಜೇಗೌಡ ಅವರು ಕೂಡ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!