ಕರಾವಳಿಯಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ
ಉಡುಪಿ: ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್‌ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರ ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನು ಗಾರಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ನಿಷೇಧಿಸಿ ಸರಕಾರ ಆದೇಶ ಹೊರಡಿಸಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾ ಯಿಕ, ನಾಡದೋಣಿಗಳು ಕರಾವಳಿ ಮೀನುಗಾರಿಕೆ ಕೈಗೊಳ್ಳಲು ಅನುಮತಿ ನೀಡಲಾಗಿದೆ.