ಮಂಗಳೂರು: ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ: ಕೇರಳ ಮೂಲದ ವ್ಯಕ್ತಿಯ ಬಂಧನ
ಮಂಗಳೂರು: ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನಲೆ ಇದೀಗ ಕೇರಳ ಮೂಲದ ಸಜಿತ್ ಎಂಬಾತನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಜಿತ್ ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಪ್ರತಿಷ್ಠಿತ ಹೋಟೆಲ್, ಖಾಸಗಿ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.





