March 17, 2026

ಮೈಸೂರು: 1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸಬ್ ಇನ್‌ಸ್ಪೆಕ್ಟ‌ರ್

0
image_editor_output_image-465850611-1717059950300.jpg

ಮೈಸೂರು: ಇಲ್ಲಿನ ಕುವೆಂಪುನಗರ ಠಾಣೆಯ ಸಬ್ ಇನ್‌ಸ್ಪೆಕ್ಟ‌ರ್ ರಾಧಾ ವ್ಯಕ್ತಿಯೊಬ್ಬರಿಂದ ಗುರುವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನವನ್ನು ಬಿಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.

ಮೊದಲ ಕಂತಿನಲ್ಲಿ ₹50 ಸಾವಿರವನ್ನು ಠಾಣೆಯಲ್ಲಿ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಲಾಗಿದ್ದು, ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!