May 6, 2026

ಮಂಗಳೂರು: ನಮಾಝ್ ನಿರ್ವಹಿಸಿದವ ಮೇಲೆ ಪೊಲೀಸರು ದಾಖಲಿಸಿದ್ದ ಸುಮೋಟೊ ಕೇಸ್ ರದ್ದು

0
image_editor_output_image317844273-1717069919493.jpg

ಮಂಗಳೂರು: ನಗರದ ಕಂಕನಾಡಿಯ ಮಸೀದಿ ಬಳಿಯ ರಸ್ತೆಯಲ್ಲಿ ಮೇ 24ರಂದು ನಮಾಝ್ ನಿರ್ವಹಿಸಿದ ಹಿನ್ನೆಲೆಯಲ್ಲಿ ಕದ್ರಿ ಪೊಲೀಸರು ಸ್ವಯಂ ಪ್ರೇರಿತವಾಗಿ (ಸುಮೋಟೊ) ದಾಖಲಿಸಿಕೊಂಡಿದ್ದ ಪ್ರಕರಣವನ್ನು ರದ್ದುಗೊಳಿಸಲಾಗಿದೆ.

ಈ ಮಧ್ಯೆ ಸಮಾಜದಲ್ಲಿ ಶಾಂತಿಭಂಗವನ್ನುಂಟು ಮಾಡಿದ ಆರೋಪದ ಮೇರೆಗೆ ಬಜರಂಗ ದಳದ ಮುಖಂಡ ಶರಣ್ ಪಂಪೈಲ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕದ್ರಿ ಇನ್ಸೆಕ್ಟರ್ ರಜೆಯ ಮೇಲೆ ಕಳುಹಿಸಲಾಗಿದೆ.

ಕಳೆದ ಶುಕ್ರವಾರ ಮಸೀದಿ ಪಕ್ಕದ ಒಳ ರಸ್ತೆಯ ಬದಿಯಲ್ಲಿ ನಮಾಝ್ ನಿರ್ವಹಿಸಿರುವ ವೀಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಮ್ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.

ನಿನ್ನೆ ಮುಸ್ಲಿಮ್ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಕೇಸ್ ವಾಪಸ್ ಪಡೆಯದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್ ಡಿಪಿಐ ಪಕ್ಷ ನಾಳೆ ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.

Leave a Reply

Your email address will not be published. Required fields are marked *

error: Content is protected !!