May 6, 2026

ಮುಂಬೈ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣ: ಗ್ಯಾಂಗ್ ಸ್ಟರ್ ಚೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ

0
image_editor_output_image-745232577-1717084547830

ಮುಂಬೈ: 2001ರಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ವಿಶೇಷ ನ್ಯಾಯಾಲಯ ಗುರುವಾರ (ಮೇ30) ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂ ಸಿಒಸಿಎ) ಅಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎ.ಎಂ .ಪಾಟೀ ಲ್ ಅವರು, ಚೋಟಾ ರಾಜನ್ ಅಪರಾಧಿ ಎಂದು ತೀ ರ್ಪು ನೀ ಡಿದ್ದಾರೆ.

ಜಯ ಶೆಟ್ಟಿ ದಕ್ಷಿಣ ಮುಂಬೈನ ಗ್ರಾಂಟ್ ರೋಡ್ ಪ್ರದೇಶದ ಪ್ರಸಿದ್ಧ ಗೋಲ್ಡನ್ ಕ್ರೌನ್ ಹೋಟೆಲ್ ಮತ್ತು ಬಾರ್‌ನ ಮಾಲೀಕರಾಗಿದ್ದು, ಅವರನ್ನು ಹೋ ಟೆಲ್‌ ನ ಮೊದಲ ಮಹಡಿಯಲ್ಲಿ 2001ರ ಮೇ 4ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.ಹೊಟೇಲ್ ಮ್ಯಾನೇಜರ್‌ ನೀ ಡಿದ್ದ ದೂರಿನ ಅನ್ವಯ ಪೊಲೀ ಸರು ಪ್ರಕರಣ ದಾಖಲಿಸಿಕೊಂಡಿದ್ದರು.ಶೆಟ್ಟಿ ಅವರಿಂದ ಸುಲಿಗೆ ಮಾಡಲು ರಾಜನ್ ಗ್ಯಾಂಗ್‌ ಹೇ ಮಂ ತ್ ಪೂಜಾರಿ ಕರೆಮಾಡುತ್ತಿದ್ದ. ಆದರೆ, ಹಣ ನೀ ಡದ್ದಕ್ಕೆ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿತ್ತು.

ಸುಲಿಗೆ ಮತ್ತು ಸಂಬಂಧಿತ ಕೃತ್ಯಗಳ ಸಂಬಂಧ ರಾಜನ್ ವಿರುದ್ಧ ಎಂಸಿಒಸಿಎ ಅಡಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಶೆಟ್ಟಿ ಪ್ರಕರಣವನ್ನೂ ಅದೇ ಕಾಯ್ದೆ ಅಡಿಯಲ್ಲಿ ಸೇ ರಿಸಿಕೊಳ್ಳಲಾಗಿತ್ತು. ಪ್ರಕರಣದ ಹಿಂ ದಿನ ವಿಚಾರಣೆಗಳ ಸಂದರ್ಭ ಇನ್ನೂ ಇಬ್ಬರನ್ನು ಅಪರಾಧಿಗಳೆಂದು ತೀ ರ್ಪು ನೀಡಲಾಗಿದೆ. ಸಾಕ್ಷ್ಯಗಳ ಕೊರತೆಯಿಂದಾಗಿ ಮತ್ತೊಬ್ಬನನ್ನು ಖುಲಾಸೆಗೊಳಿಸಲಾಗಿದೆ.ಜೂನ್ 11, 2011 ರಂದು ಪತ್ರಕರ್ತ ಜೆ. ಡೇ ಅವರನ್ನು ಹಗಲು ಹೊತ್ತಿನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 2018 ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ನಂತರ ಮುಂಬೈನಲ್ಲಿ ಛೋಟಾ ರಾಜನ್‌ಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿದ್ದಾನೆ.

ಮುಂಬೈನ ಭಯಾನಕ ಮಾಫಿಯಾ ಮುಖ್ಯಸ್ಥರಲ್ಲಿ ಒಬ್ಬರಾದ 64 ವರ್ಷದ ಛೋಟಾ ರಾಜನ್, 1989 ರಲ್ಲಿ ದುಬೈಗೆ ನುಸುಳಿದರು ಮತ್ತು ಸುಮಾರು 27 ವರ್ಷಗಳ ಕಾಲ ಓಡಿಹೋಗಿ ಪರಾರಿಯಾಗಿ ಕಳೆದ ನಂತರ ನವೆಂಬರ್ 2015 ರಲ್ಲಿ ಇಂಡೋನೇಷ್ಯಾದಿಂದ ಭಾರತಕ್ಕೆ ಗಡೀಪಾರು ಮಾಡಲಾಯಿತು.

Leave a Reply

Your email address will not be published. Required fields are marked *

error: Content is protected !!