May 6, 2026

“ನಾನೇನು ಮಾಡಿಲ್ಲ.. ನಂಗೇನು ಗೊತ್ತಿಲ್ಲ’ ಎಂದ ಪ್ರಜ್ವಲ್ ರೇವಣ್ಣ

0
image_editor_output_image1804165512-1717134930875.jpg

ಬೆಂಗಳೂರು: ದೇಶ ಬಿಟ್ಟು ಪರಾರಿಯಾಗಿದ್ದ ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನವಾಗಿದೆ. ಎಪ್ರಿಲ್ 27 ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ನಿನ್ನೆ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಡ್ತಾ ಇದ್ದಂತೆ SIT ವಶಕ್ಕೆ ಪಡೆದುಕೊಂಡಿದೆ.

ಸ್ಥಳದಲ್ಲಿದ್ದ ಭದ್ರತಾ ಸಿಬಂದಿ ಹಾಗೂ ವಲಸೆ ಅಧಿಕಾರಿಗಳು ವಿಶೇಷ ಕೊಠಡಿಗೆ ಕರೆ ತಂದು ಪರಿಶೀಲನೆ ನಡೆಸಿದ್ದಾರೆ. ಅವರ ಬೆರಳಚ್ಚು ಹಾಗೂ ಫೊಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಹಿರಿಯ ಎಸ್‌ಐಟಿ ಅಧಿಕಾರಿ ಪ್ರಜ್ವಲ್‌ನನ್ನು ವಿಮಾನ ನಿಲ್ದಾಣದಿಂದ ಎಸ್‌ಐಟಿ ಕಛೇರಿಗೆ ವಿಮಾನ ನಿಲ್ದಾಣದ ಹಿಂದಿನ ಗೇಟ್ ಮೂಲಕ ಪ್ರಜ್ವಲ್‌ನನ್ನು ಹೊರಗೆ ಕರೆದೊಯ್ದಿದ್ದಾರೆ. ವಿಮಾನ ನಿಲ್ದಾಣ, ಬಳ್ಳಾರಿ ರಸ್ತೆಯುದ್ದಕ್ಕೂ ಹಾಗೂ ಎಸ್‌ಐಟಿ ಕಛೇರಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಇನ್ನು ಎಸ್‌ಐಟಿ ತನಿಖೆ ಪ್ರಜ್ವಲ್ ಸಹಕಾರ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲ ಸುಳ್ಳು. ಯಾವ ಪ್ರಕರಣಗಳಿಗೂ ನನಗೂ ಸಂಬಂಧವಿಲ್ಲ. ನಾನೇನು ಮಾಡಿಲ್ಲ.. ನಂಗೇನು ಗೊತ್ತಿಲ್ಲ ಎಂದು ತನಿಖೆ ವೇಳೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಪ್ರಜ್ವಲ್ ಮೊಬೈಲ್ ವಶಪಡಿಸಿಕೊಂಡಿದ್ದು ಮೊಬೈಲ್‌ನಲ್ಲಿ ಡೇಟಾ ರಿಟ್ರೀವ್‌ ಮಾಡಲು ಎಫ್ಎಸ್ಎಲ್‌ ಗೆ ಕಳುಹಿಸಿಕೊಡಲಾಗಿದೆ.

Leave a Reply

Your email address will not be published. Required fields are marked *

error: Content is protected !!