March 24, 2026

ಚುನಾವಣೋತ್ತರ ಸಮೀಕ್ಷೆ ಬಗ್ಗೆ ವಿಶ್ವಾಸ ಇಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

0
110588561.png

ಬೆಂಗಳೂರು: ಲೋಕಸಭಾ ಚುನಾವಣೆ 2024ರ ಬಹುನಿರೀಕ್ಷಿತ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶಗಳು ಹೊರಬಂದಿವೆ. ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆದರೆ, ಕೇರಳದಲ್ಲಿ ಬಿಜೆಪಿ 2-3 ಸ್ಥಾನ ಗೆಲ್ಲುವುದಾಗಿ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾಗುತ್ತದೆ ಎಂದು ಸಮೀಕ್ಷೆಗಳು ಹೇಳಿದೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡು ಅಂಕಿ ದಾಟುತ್ತದೆ. ಈ ಚುನಾವಣೆ ಸಮೀಕ್ಷೆ ಬಗ್ಗೆ ನನಗೆ ವಿಶ್ವಾಸವಿಲ್ಲ. ಈ ಸಮೀಕ್ಷೆಗಳು ಕೆಲವರ ಅಭಿಪ್ರಾಯ ಮಾತ್ರ ಎಂದು ಅವರು ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಡಿಕೆ ಶಿವಕುಮಾರ್ ಅವರು ಇದೇ ರೀತಿ ಒಂದು ಹೇಳಿಕೆ ನೀಡಿದ್ದರು. ಯಾವುದೇ ಸಮೀಕ್ಷೆಯ ಮೇಲೆ ನನಗೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 130 ರಿಂದ 135 ಸ್ಥಾನಗಳನ್ನು ಗಳಿಸಲಿದೆ ಎಂದು ಹೇಳಿಕೆ ನೀಡಿದ್ದರು. ಅದೇ ನಿಜವಾಗಿತ್ತು.

ಈಗಲೂ ಡಿಕೆ ಶಿವಕುಮಾರ್ ಇದೇ ರೀತಿ ಒಂದು ಹೇಳಿಕೆ ನೀಡಿದ್ದು, ಜೂನ್ 4ರ ಫಲಿತಾಂಶದ ಮೇಲೆ ಕುತೂಹಲ ಹೆಚ್ಚಿಸಿದೆ.

Leave a Reply

Your email address will not be published. Required fields are marked *

error: Content is protected !!