July 4, 2026

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಗರ್ಭಿಣಿ ಮಾಡಿದ ಮೂವರು: ಅಪ್ರಾಪ್ತ ಬಾಲಕ ಸಹಿತ ಮೂವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0
rape_0_1200x768.jpeg

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಮೂವರು ಅತ್ಯಾಚಾರ ಮಾಡಿ ಆಕೆ ಆರು ತಿಂಗಳ ಗರ್ಭಿಣಿಗೆ ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಮೂವರ ವಿರುದ್ಧ ಮೇ.31 ರಂದು ಪ್ರಕರಣ ದಾಖಲಾಗಿದೆ‌.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೂವರು ಸೇರಿ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೊಂದ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಓರ್ವ ಅಪ್ರಾಪ್ತ ಬಾಲಕ ಸೇರಿ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು. ಪ್ರಕರಣ ಸಂಬಂಧ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26) ಫಾರೂಕ್(19) ಹಾಗೂ ಅಪ್ರಾಪ್ತ ಬಾಲಕನನ್ನು ಜೂ.1 ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ‌. ಮತ್ತೊಬ್ಬ ಅಪ್ರಾಪ್ತನನ್ನು ಮಂಗಳೂರು ಬಾಲ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ಮಂಗಳೂರು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ‌.

Leave a Reply

Your email address will not be published. Required fields are marked *

You may have missed

error: Content is protected !!