ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ಬದ್ರುದ್ದೀನ್ ಕೆ. ಮಾಣಿ ಸೇರಿ ಮೂವರು ನೇಮಕ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರನ್ನಾಗಿ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗ ಮುಖ್ಯಸ್ಥ ಬದ್ರುದ್ಧೀನ್ ಕೆ ಮಾಣಿ ಸೇರಿದಂತೆ ಮೂವರನ್ನು ನೇಮಕ ಮಾಡಲಾಗಿದೆ.

ಈ ಕುರಿತಂತೆ ಕನ್ನಡ, ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ ಜೆಸಿಂತ ಅಧಿಸೂಚನೆ ಹೊರಡಿಸಿದ್ದು, ವಾರ್ತಾ ಇಲಾಖೆಯ ಅಧೀನದಲ್ಲಿನ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಬೆಂಗಳೂರು ವರದಿಗಾರರ ಕೂಟದ ವತಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡವರನ್ನು ಸದಸ್ಯರನ್ನಾಗಿ ನೇಮಿಸಿದ್ದಾಗಿ ತಿಳಿಸಿದೆ.
ಉದಯವಾಣಿಯ ಮುಖ್ಯ ವರದಿಗಾರ ಎಸ್.ಲಕ್ಷ್ಮೀನಾರಾಯಣ, ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥರಾದಂತ ಬದ್ರುದ್ಧೀನ್ ಕೆ ಮಾಣಿ ಹಾಗೂ ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ವಿಶೇಷ ವರದಿಗಾರ ಕೆ.ಎಂ.ಶಿವರಾಜು ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.





