July 4, 2026

ಸರಿಯಾದ ಟಾಯ್ಲೆಟ್, ಮಲಗಲು ರೂಮ್ ಕೊಡಿ: ಸಿಟ್ ಅಧಿಕಾರಿಗಳ ಮುಂದೆ ಪ್ರಜ್ವಲ್ ಕಿರಿಕ್

0
image_editor_output_image-1032545053-1717360008343.jpg

ಬೆಂಗಳೂರು: ಪೆನ್‌ಡ್ರೈವ್‌ ಕೇಸಲ್ಲಿ ಅರೆಸ್ಟ್ ಆಗಿರೋ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನ ವಿಚಾರಣೆಗೆ ಒಳಪಡಿಸಲು ಎಸ್‌ಐಟಿ ನೋಡ್ತಿದೆ. ಆದ್ರೆ, ಅಧಿಕಾರಿಗಳ ಯಾವುದೇ ಪ್ರಶ್ನೆಗೆ ಪ್ರಜ್ವಲ್ ರೇವಣ್ಣ ಉತ್ತರಿಸದೇ ಅಸಹಕಾರ ತೋರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್‌ಐಟಿ (SIT) ಅಧಿಕಾರಿಗಳ ಪ್ರಶ್ನೆಗೆ ಸೂಕ್ತ ಉತ್ತರ ನೀಡದ ಪ್ರಜ್ವಲ್, ಕಿರಿಕ್‌ ತೆಗೆಯುತ್ತಿದ್ದಾರೆ. ವಾಶ್‌ರೂಮ್‌ಗಾಗಿ ಕಿರಿಕ್ ತೆಗೆಯುತ್ತಿದ್ದಾರೆ. ನಾನು ಹಿಂಗೆಲ್ಲ ಬದುಕಿಲ್ಲ ನನಗೆ ಸರಿಯಾದ ಟಾಯ್ಲೆಟ್ ಹಾಗೂ ಮಲಗಲು ರೂಮ್ ಕೊಡಿ ಅಂತಾ ಕಿರಿಕ್ ಮಾಡ್ತಿರೋದಾಗಿ ತಿಳಿದುಬಂದಿದೆ. ಈ ವೇಳೆ ಎಸ್‌ಐಟಿ ಅಧಿಕಾರಿಗಳು ಯಾವುದೇ ಆರೋಪಿಗಳಿಗೂ ರೂಮ್ ಅದೇ ಆಗಿರುತ್ತೆ. ನಿಮ್ಮ ತಂದೆಗೂ ಇದೇ ರೂಮ್ ಕೊಡಲಾಗಿತ್ತು ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!