ಕುಂದಾಪುರ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ: ಪೊಕ್ಸೊ ಪ್ರಕರಣ ದಾಖಲು, ಆರೋಪಿ ಪರಾರಿ
ಉಡುಪಿ: ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ (25) ಎಂಬ ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ವರದಿಯಾಗಿದೆ.
ಉಡುಪಿಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.
ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರನ್ನು ತನ್ನ ಭೋಗಕ್ಕೆ ಬಳಸುತ್ತಿದ್ದ ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ಬಾಲಕಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ.





