ಬಂಡಿಪೋರಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮ
ಶ್ರೀ ನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಗುಲ್ಶನ್ ಚೌಕ್ ಪ್ರದೇಶದ ಬಳಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಕಾಶ್ಮೀರ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಐಜಿ) ವಿಜಯ್ ಕುಮಾರ್, ಉಗ್ರರು ಪೊಲೀಸ್ ಪಡೆಗಳ ಮೇಲೆ ದಾಳಿ ಮಾಡಿದಾಗ ಇಬ್ಬರು ಪೊಲೀಸರಿಗೆ ಬುಲೆಟ್‌ಗಳು ತಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇಬ್ಬರೂ ಪೊಲೀಸರನ್ನು ಮೊಹಮ್ಮದ್ ಸುಲ್ತಾನ್ ಮತ್ತು ಫಯಾಜ್ ಅಹ್ಮದ್ ಅವರು ಗಾಯಗೊಂಡು ಹುತಾತ್ಮಾರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ದಾಳಿಯ ನಂತರ, ಇಡೀ ಪ್ರದೇಶವನ್ನು ಸುತ್ತುವರೆದಿದೆ ಮತ್ತು ದಾಳಿಕೋರರನ್ನು ಹಿಡಿಯಲು ಹುಡುಕಾಟವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.





