ವಿದ್ಯಾರ್ಥಿನಿ ನಾಪತ್ತೆ

ಹೂಸ್ಟನ್: 23 ವರ್ಷದ ಭಾರತೀಯ ವಿದ್ಯಾರ್ಥಿನಿಯೊಬ್ಬಳು ಕಳೆದ ವಾರದಿಂದ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದು, ಆಕೆಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಕೋರಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗೆ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿಕೊಂಡು ಹತ್ಯೆಗೈಯ್ಯುವ ಹಾಗೂ ದಾಳಿ ನಡೆಸುವ ಪ್ರಕರಣ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ವರದಿ ಹೇಳಿದೆ.
ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿರ್ವಸಿಟಿಯ ಸ್ಯಾನ್ ಬರ್ನಾಡಿನೊ ವಿದ್ಯಾರ್ಥಿನಿ ನಿತೀಶಾ ಕಂದುಲಾ ಮೇ 28ರಂದು ನಾಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.