ಗುಜರಾತ್‌ನಲ್ಲಿ ಬಿಜೆಪಿ ನಾಗಾಲೋಟ: ಮಹಾರಾಷ್ಟ್ರದಲ್ಲೂ ಬಿಜೆಪಿ ಮೇಲುಗೈ

ಹೊಸದಿಲ್ಲಿ: ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ.
ಗುಜರಾತ್‌ನಲ್ಲಿ ಬಿಜೆಪಿ ನಾಗಾಲೋಟ: 26 ಲೋಕಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಇಲ್ಲಿನ ಒಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 25ರಲ್ಲಿ 20 ಕಡೆ ಮುನ್ನಡೆ ಕಾಯ್ದುಕೊಂಡಿದೆ.
ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಮಹಾರಾಷ್ಟ್ರದಲ್ಲೂ ಬಿಜೆಪಿ ಮೇಲುಗೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದ ಭಾಗವಾಗಿರುವ ಬಿಜೆಪಿ, ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 17 ಕಡೆ ಮುಂದೆ ಇದೆ. ಮೈತ್ರಿ ಸರ್ಕಾರದ ಭಾಗವಾಗಿರುವ ಎನ್‌ಸಿಪಿ (ಅಜಿತ್ ಪವಾರ್ ಬಣ) 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.