ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್ 8, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ

ಕರ್ನಾಟಕ: ಮಂಡ್ಯ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 54,658 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
3ನೇ ಸುತ್ತಿನ ಮತ ಎಣಿಕೆ ಬಳಿಕ ಅವರಿಗೆ 1,34,457 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 79,700 ಮತ ಗಳಿಸಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಬಿಜೆಪಿ 16 , ಕಾಂಗ್ರೆಸ್ 8 ಹಾಗೂ ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.