NDA 245 ಕ್ಷೇತ್ರಗಳಲ್ಲಿ, INDIA 99 ಕ್ಷೇತ್ರಗಳಲ್ಲಿ ಮುನ್ನಡೆ

ಹೊಸದಿಲ್ಲಿ: ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ.
ಆರಂಭಿಕ ಹಂತದ ಮತ ಎಣಿಕೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದೆ. ಎನ್‌ಡಿಎ ಅಭ್ಯರ್ಥಿಗಳು 245 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣದ ಅಭ್ಯರ್ಥಿಗಳು 99 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.