ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ 90,000 ಮತಗಳ ಮುನ್ನಡೆ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಭಾರೀ ಹಿನ್ನಡೆ

ಬೆಂಗಳೂರು: ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎನ್. ಮಂಜುನಾಥ್ ಅವರು ಹಾಲಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಬೆಳಗ್ಗೆ 10:50ರ ಹೊತ್ತಿಗೆ ಕಾಂಗ್ರೆಸ್‌ನ ಡಿ.ಕೆ ಸುರೇಶ್ ಅವರಿಗಿಂತ ಮಂಜುನಾಥ್ ಅವರು 90,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದೇ ಟ್ರೆಂಡ್ ಮುಂದುವರಿದರೆ ಮಂಜುನಾಥ್ ಅವರಿಗೆ ಸುಲಭ ಗೆಲುವು ಲಭಿಸಲಿದೆ. ಮಂಜುನಾಥ್ ಅವರ ಮುನ್ನಡೆ ಅಂತರ ನಿರಂತರವಾಗಿ ಏರುತ್ತಲೇ ಇದೆ. ಬಹುತೇಕ ಮಂಜುನಾಥ್ ಅವರಿಗೆ ಗೆಲುವು ಸುಲಭವಾಗಲಿದೆ ಎಂದು ಹೇಳಲಾಗುತ್ತಿದೆ