ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು
ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.
13 ನೇ ಸುತ್ತಿನ ಮತ ಎಣಿಕೆ ಬಳಿಕ ರಾಘವೇಂದ್ರ 1,05,927 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿ.ವೈ ರಾಘವೇಂದ್ರ – 354207, ಕಾಂಗ್ರೆಸ್ ನ ಗೀತಾ ಶಿವರಾಜ್ ಕುಮಾರ್ – 242280 ಮತಗಳು ಮತ್ತು ಪಕ್ಷೇತರ (ಬಿಜೆಪಿ ಬಂಡಾಯ) ಅಭ್ಯರ್ಥಿಯಾಗಿರುವ ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ 14,414 ಮತಗಳನ್ನು ಪಡೆದಿದ್ದಾರೆ.




