ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋಲು
ಲಕ್ನೋ: ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸೋಲನುಭವಿಸಿದ್ದಾರೆ.
ಕಾಂಗ್ರೆಸ್ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಿಂದ ರಾಹುಲ್ ಗಾಂಧಿ ಬದಲಿಗೆ ಸಾಮಾನ್ಯ ಕಾರ್ಯಕರ್ತ ಕಿಶೋರಿ ಲಾಲ್ ಶರ್ಮಾ ಅವರನ್ನು ಕಣಕ್ಕಿಳಿಸಿತ್ತು. ರಾಹುಲ್ ಗಾಂಧಿ ಕುಟುಂಬದ ವಿಶ್ವಾಸಾರ್ಹ ವ್ಯಕ್ತಿ ಎಂದು ಕರೆಸಿಕೊಳ್ಳುವ ಕಿಶೋರಿ ಲಾಲ್ ಶರ್ಮಾ ಅವರು ಸ್ಮೃತಿ ಇರಾನಿಗೆ ಸಕತ್ ಫೈಟ್ ನೀಡಿ, ಭರ್ಜರಿ ಗೆಲುವು ದಾಖಲಿಸಿದ್ದಾರೆ.





