May 6, 2026

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

0
praveen-4.jpg

ನವದಹಲಿ: ವಿದೇಶಕ್ಕೆ ಹಾರಲು ಯತ್ನಿಸುತ್ತಿದ್ದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ಆರೋಪಿ. ರಿಯಾಜ್ ಯೂಸಫ್ ಹಾರಳ್ಳಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಮಂಗಳವಾರ ಬಂಧಿಸಿದೆ.

ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ ಬಂಧನವಾಗಿದೆ.

Leave a Reply

Your email address will not be published. Required fields are marked *

error: Content is protected !!