March 18, 2026

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲುತೂರಾಟ

0
Pradeep-Eshwar-Wiki-biografia-anos-programas-de-television-familia-imagenes.jpg

ಚಿಕ್ಕ ಬಳ್ಳಾಪುರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಇದೀಗ ಕಲ್ಲುತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕಿಡಿಗೇಡಿಗಳು ನಿನ್ನೆ ರಾತ್ರಿ ಪ್ರದೀಪ್​ ಮನೆ ಮೇಲೆ ಕಲ್ಲು ತೂರಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್‌ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್‌ ಈಶ್ವರ್‌ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!