March 18, 2026

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾರನ್ನು ಬಂಧಿಸಿದ ಸಿಸಿಬಿ ಪೊಲೀಸರು

0
image_editor_output_image103112068-1717565348932.jpg

ಬೆಂಗಳೂರು: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿಕ್ಕು ತಪ್ಪಿಸುವ ಯತ್ನ ಮಾಡಿದ್ದ ಆರೋಪದ ಮೇಲೆ ತೆಲುಗು ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧನಕ್ಕೊಳಗಾದ ನಟಿಯನ್ನು ಜೂ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಂಯಾಂಗ ಬಂಧನಕ್ಕೆ ಆದೇಶಿಸಿದೆ.

ಇತ್ತೀಚೆಗೆ ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ ಹೇಮಾ ರಿಪೋರ್ಟ್ ಪಾಸಿಟೀವ್ ಬಂದಿತ್ತು. ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.

ಆದರೆ ಅವರು ಅನಾರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಸಮಯಾವಕಾಶ ಕೇಳಿದ್ದರು. ಹಾಜರಾಗದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು 2ನೇ ನೋಟಿಸ್ ಕೂಡ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!