“ನಾನು NDA ಜೊತೆ ಇದ್ದೇನೆ, ಹೊಸ ಸರ್ಕಾರ ರಚಿಸಲು BJPಗೆ ಬೆಂಬಲ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು
ಹೊಸದಿಲ್ಲಿ: ನಾನು NDA ಜೊತೆ ಇದ್ದೇನೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ನಾನು ದಿಲ್ಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದೆವು. ಇಂದು ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದರು.





