ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ
ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಳದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಹಲ್ಲೆಗೊಳಾಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ಆರೋಪಿ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಕ್ಕೆ ಕಾರ್ಯಕರ್ತ ರಾಜೇಶ್ ಪಟಾಕಿ ಸಿಡಿಸಿದ್ದರು. ಆರೋಪಿ ಕುಶಲಪ್ಪ ಮನೆ ಮುಂದೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಾಗಾದ ಬಿಜೆಪಿ ಕಾರ್ಯಕರ್ತ ರಾಜೇಶ್ ಎಮ್.ಕೆ ಅವರನ್ನು ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.





