ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತ: ಸಮಯ ಪ್ರಜ್ಞೆಯಿಂದ ಮಕ್ಕಳು ಪಾರು
ಉಡುಪಿ: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.
ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ.
ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು. ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.





