ಹರಿಯಾಣ: ಜಜ್ಜಾರ್‌ನಲ್ಲಿ ಸರಣಿ ಅಪಘಾತ:
9 ಮಂದಿ ಮೃತ್ಯು
ಹರಿಯಾಣ: ಶುಕ್ರವಾರ ಮುಂಜಾನೆ ಇಲ್ಲಿ ಬಹದ್ದೂರ್ಗಡ್ ಪಟ್ಟಣದ ಸಮೀಪದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ನಾಲ್ಕು ವಾಹನಗಳು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮುಂಜಾನೆ 3.30 ರ ಸುಮಾರಿಗೆ ರಾಜಸ್ಥಾನದಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ 11 ಜನರನ್ನು ಹೊತ್ತ ಎರ್ಟಿಗಾ ಕಾರಿನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಉತ್ತರ ಪ್ರದೇಶದ ಕಡೆ ಪ್ರಯಾಣ ಬೆಳೆಸುತ್ತಿದ್ದ ಕಾರೊಂದರಲ್ಲಿ ಒಟ್ಟು 11 ಮಂದಿ ಇದ್ದು, 8 ಮಂದಿ ಬಲಿಯಾಗಿದ್ದಾರೆ. ಸ್ಥಳಕ್ಕೆ ಬಹದ್ದೂರ್ಗಢ್ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಗ್ಗೆ ತಿಳಿದುಕೊಳ್ಳಲು ಏಳು ಜನರನ್ನು ಹೊತ್ತ ECCO ಕಾರು ಅಲ್ಲಿ ನಿಲ್ಲಿಸಿತು ಎಂದು ಮೂಲಗಳು ತಿಳಿಸಿವೆ. ಹಿಂದಿನಿಂದ ಮತ್ತೊಂದು ಟ್ರಕ್ ಕೂಡ ಡಿಕ್ಕಿ ಹೊಡೆದು ಅದರಲ್ಲಿದ್ದ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ.
ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.





