June 11, 2026

ಬೆಳ್ತಂಗಡಿ: ಬಿಜೆಪಿ ಮುಖಂಡನ ಮೇಲೆ ತಲವಾರು ದಾಳಿ, ಆರೋಪಿಯ ಬಂಧನ

0
image_editor_output_image-1422679839-1717655324419.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಎಸ್‌ಟಿ ಯುವ ಮೋರ್ಚಾ ಅಧ್ಯಕ್ಷ ರಾಜೇಶ್‌ ನಿಡ್ಡಾಜೆ (33) ಎಂಬವರ ಮೇಲೆ ಜೂ.4ರಂದು ರಾತ್ರಿ ತಲವಾರು ದಾಳಿ ನಡೆಸಿ ಕೊಲೆ ಯತ್ನ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಶಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!