ಕಾರವಾರ: ಉತ್ತರಾಖಂಡದಲ್ಲಿ ಹಿಮಪಾತವಾಗಿ ನಾಪತ್ತೆಯಾಗಿದ್ದ ಯುವತಿ ಮೃತ್ಯು
ಕಾರವಾರ: ಉತ್ತರಾಖಂಡದಲ್ಲಿ ಆದ ಹವಾಮಾನ ವೈಪರೀತ್ಯ ದಿಂದ ಹಿಮಪಾತವಾಗಿ ನಾಪತ್ತೆಯಾದ ಚಾರಣಿಗರಲ್ಲಿ ಶಿರಸಿ ತಾಲೂಕಿನ ಜಾಗನಹಳ್ಳಿಯ ಯುವತಿ ಪದ್ಮಿನಿ ಎಂಬವರು ಕೂಡಾ ಒಬ್ಬರು. ಅವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳ ಜೊತೆ ಬೆಂಗಳೂರಿನಿಂದ 18 ಮಂದಿ ಹಾಗೂ ಪುಣೆಯಿಂದ ಒಬ್ಬರ ಜೊತೆ ತೆರಳಿದ್ದರು.
ಇವರೊಂದಿಗೆ ಜಾಗನಹಳ್ಳಿ ಮೂಲದ ಬೆಂಗಳೂರು ನಿವಾಸಿ, ಗೂಗಲ್ ಕಂಪನಿಯಲ್ಲಿ ನೌಕರಿ ಮಾಡುತ್ತಿದ್ದ ಪದ್ಮಿನಿ ಹೆಗಡೆ (35) ಅವರು ಒಬ್ಬರಾಗಿದ್ದರು.





