April 24, 2026

ಉಡುಪಿ: ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ, ಆರೋಪಿಯ ಬಂಧನ

0
image_editor_output_image-47009983-1717703117522.jpg

ಉಡುಪಿ: ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದ ಗಾಂಜಾ ಸಹಿತ ವ್ಯಕ್ತಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಹೆರ್ಗಾ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ ತಿರುವನಂತಪುರ ಮೂಲದ ಸಿದ್ಧಾರ್ಥ್‌ (22) ಎಂಬಾತನನ್ನು ಬಂಧಿಸಲಾಗಿದೆ.

ಜೂನ್ 5ರಂದು ಸಂಜೆ 5 ಗಂಟೆಗೆ ಮಣಿಪಾಲ ಠಾಣಾ ಪೊಲೀಸ್‌ ನಿರೀಕ್ಷಕ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!