March 5, 2026

ಮಸೀದಿಗಳಾಗಿ ಮಾರ್ಪಾಡು ಮಾಡಲಾದ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ: ಪೇಜಾವರ ಸ್ವಾಮೀಜಿ

0
image_editor_output_image1702531598-1717703629223.jpg

ಬೆಳಗಾವಿ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿರುವುದು ಮತ್ತೆ ವಿವಾದಕ್ಕೆ ಕಾರಣವಾಗಿದೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿ, ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು.

ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ. ಈ ಹಿಂದೆ ನಮಗೆ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ನ್ಯಾಯಯುತ ಹೋರಾಟದಲ್ಲಿ ಜಯ ಸಿಗುವ ವಿಶ್ವಾಸವಿದೆ ಎಂದ ಅವರು ಅಯೋಧ್ಯೆಯ ರಾಮ ಮಂದಿರ ಪ್ರಕರಣದಲ್ಲಿ ಕಾನೂನಿನ ಮೂಲಕವೇ ನಮಗೆ ನ್ಯಾಯ ಸಿಕ್ಕಿದೆ ಎಂದರು.

Leave a Reply

Your email address will not be published. Required fields are marked *

error: Content is protected !!