March 5, 2026

ಬಂಟ್ವಾಳ: ಮನೆ ನಿರ್ಮಾಣ ಕಾಮಗಾರಿ ವೇಳೆ ಬಿದ್ದು ಮೇಸ್ತ್ರಿ ಸಾವು

0
image_editor_output_image-2064723513-1717704130565.jpg

ಬಂಟ್ವಾಳ: ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ ( 45) ಎಂದು ಗುರುತಿಸಲಾಗಿದೆ.

ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!