April 24, 2026

ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಕಾರು: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವು

0
image_editor_output_image1469278363-1717739549528.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನಗರಗೆರೆ ಬಳಿಯ‌ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗುರುವಾರ ತಡರಾತ್ರಿ ನಡೆದ ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯ ಲೈನ್‌‌ಮ್ಯಾನ್‌ಗಳಾದ ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!