ಕಾನಾಹೊಸಹಳ್ಳಿ: ಸಮೀಪದ ಕಾತ್ರಿಕೆಹಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕಿ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ತುಳಸಿ(8) ಮೃತ ಬಾಲಕಿ.ವಿದ್ಯುತ್ ಕಂಬಕ್ಕೆ ಹಾಕಿದ್ದ ತಂತಿ ತಗುಲಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಸ್ಥಳಕ್ಕೆ ಕಾನಾಹೊಸಹಳ್ಳಿ ಪಿಎಸ್ಐ ಎರಿಯಪ್ಪ ಅಂಗಡಿ, ಜೆಸ್ಕಾಂ ಅಧಿಕಾರಿ ಮಾರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.