March 5, 2026

‘ಹಮ್ ದೊ ಹಮಾರೆ ಬಾರಾ’ ಪ್ರದರ್ಶನ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

0
Hum-Do-Hamare-Baarah1.jpg

ಬೆಂಗಳೂರು: ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿ ರೀತಿಯಲ್ಲಿ ತೋರಿಸಿದ್ದಕ್ಕಾಗಿ ರಾಜ್ಯದಲ್ಲಿ ಬಾಲಿವುಡ್ ಸಿನಿಮಾ ‘ಹಮ್ ದೊ ಹಮಾರೆ ಬಾರಾ’ ಪ್ರದರ್ಶನಕ್ಕೆ ನಿಷೇಧಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ ಅಡಿ ಸರ್ಕಾರದಿಂದ ಈ ಒಂದು ಚಿತ್ರ ಪ್ರದರ್ಶನಕ್ಕೆ ನಿಷೇಧಿಸಲಾಗಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ರೀತಿಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ರಾಜ್ಯ ಸರಕಾರದ ಆದೇಶ ಉಲ್ಲಂಘನೆ ಕಂಡುಬಂದಲ್ಲಿ, ಕಾನೂನು ರೀತಿಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!