ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಆರ್ಟ್ ಆಫ್ ಪೇರೆಂಟಿಂಗ್: ಮೌಲ್ಯಾಧಾರಿತ ಶಿಕ್ಷಣ ಮತ್ತು ಉತ್ತಮ ಆರೋಗ್ಯಕ್ಕೆ ಹೆಚ್ಚಿನ ಒತ್ತು: ಡಾ. ಅಬ್ದುಲ್ ಬಶೀರ್ ವಿ.ಕೆ
ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವತಿಯಿಂದ ಮಕ್ಕಳ ಹೆತ್ತವರ ಸಭೆ ಆರ್ಟ್ ಆಫ್ ಪೇರೆಂಟಿಂಗ್ ಕಾರ್ಯಕ್ರಮ ಮಾಣಿಯ ಜನಪ್ರಿಯ ಗಾರ್ಡನ್ ನಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮವನ್ನು ಜನಪ್ರಿಯ ಫೌಂಡೇಶನ್ ನ ಚೇರ್ ಮೆನ್ ಡಾ.ಅಬ್ದುಲ್ ಬಶೀರ್ ವಿ.ಕೆ ಅವರು ಉದ್ಘಾಟಿಸಿ, ಮಾತನಾಡಿ ಗ್ರಾಮೀಣ ಭಾಗದ ಜನತೆಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಒದಗಿಸುವುದು ನನ್ನ ಗುರಿಯಾಗಿದ್ದು ಇದಕ್ಕಾಗಿ ಜನಪ್ರಿಯಾ ಸಂಸ್ಥೆ ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಯಾವುದೇ ಒಬ್ಬ ವ್ಯಕ್ತಿಗೆ ಮೌಲ್ಯಾಧಾರಿತ ಶಿಕ್ಷಣ ಮತ್ತು ಉತ್ತಮ ಆರೋಗ್ಯ ಇದ್ದರೆ ಆತ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಜನಪ್ರಿಯ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಈ ಎರಡು ಕಾರ್ಯಗಳನ್ನು ಬಹಳ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದರು.
ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷೆ ಫಾತಿಮಾ ನಸ್ರೀನ ಬಶೀರ್ ಅವರು ಮಾತನಾಡಿ ಶಿಕ್ಷಕರು ಮತ್ತು ಹೆತ್ತವರು ಮಕ್ಕಳ ಕಲಿಕೆ ಬಗ್ಗೆ ಹೆಚ್ಚಿನ ಒತ್ತು ನೀಡಿದಾಗ ಮಕ್ಕಳು ಸಮಾಜದಲದಲ್ಲಿ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗುತ್ತದೆ ಎಂದರು.
ತರಬೇತುಗಾರ್ತಿ ಸಜಸ್ ಕೆ.ಜೆ ಅವರು ದಿಕ್ಸೂಚಿ ಭಾಷಣ ಮಾಡಿದರು. ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕ ಎ ಅರ್ ನೌಶೀನ್ ಬದ್ರಿಯಾ, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್ ಭಾಗವಹಿಸಿದ್ದರು.




