ನೀರಿನ ಟ್ಯಾಂಕರ್ ಗೆ ಬೈಕ್ ಢಿಕ್ಕಿ: ಅಕ್ಕ, ತಮ್ಮ ಸ್ಥಳದಲ್ಲೇ ಮೃತ್ಯು
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿ ಮಧುಮಿತಾ (20) ಹಾಗೂ ಅವರ ತಮ್ಮ ರಂಜನ್ (18) ಮೃತಪಟ್ಟವರು.
ಮಧುಮಿತಾ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ರಂಜನ್ ಮೊದಲ ವರ್ಷದ ಪದವಿ ವಿದ್ಯಾರ್ಥಿ.





