February 4, 2026

ಕಾಪು: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

0
image_editor_output_image112358203-1717829976913.jpg

ಉಡುಪಿ: ಕಾಪು ಕಡಲ ತೀರದಲ್ಲಿ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಯುವಕ ಕರಣ್ ಸಾಲ್ಯಾನ್ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.

ಮೃತ ಯುವಕನನ್ನು ಕಾಪು ಪಡುಗ್ರಾಮದ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕು, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತಂದೆ ತುಳಸಿ ಸಾಲ್ಯಾನ್‌ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!