March 24, 2026

ಬೆಳ್ತಂಗಡಿಗೆ ಬರುತ್ತಿದ್ದ ಬಸ್ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

0
image_editor_output_image-187277294-1717918301065

ಶಿವಮೊಗ್ಗ: ಸಾಗರದಿಂದ ಬೆಳ್ತಂಗಡಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ನಡೆದಿದೆ.

ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ.

ಧಾರಾಕಾರವಾಗಿ ಸುರಿದ ಮಳೆಯ ಕಾರಣದಿಂದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗರ, ಆನಂದಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

error: Content is protected !!