ಮಂಗಳೂರು: ದರೋಡೆಗೆ ಸಂಚು ರೂಪಿಸುತ್ತಿದ್ದ ಮೂವರ ಬಂಧನ
ಮಂಗಳೂರು: ನಗರದ ಉಳ್ಳಾಲ ಮುಕ್ಕಚ್ಚೇರಿ ಪರಿಸರದಲ್ಲಿ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಉಳ್ಳಾಲದ ಮುಕ್ಕಚ್ಚೇರಿ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಶ್ರೀಮಂತ ವ್ಯಕ್ತಿಗಳನ್ನು, ವ್ಯಾಪಾರಸ್ಥರನ್ನು ದರೋಡೆ ನಡೆಸಲು ಸಂಚು ರೂಫಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿಕೊಂಡು ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಕುಖ್ಯಾತ ಆರೋಪಿಗಳನ್ನು ಬಂದಿಸಿದ್ದಾರೆ.
ಆರೋಪಿಗಳಾದ 1. ಮುಹಮ್ಮದ್ ಸಮೀರ್ ಅಲಿ @ ಕಡಪರ ಸಮೀರ್(33), ವಾಸ: ಕಿಲಿರಿಯ ನಗರ, ಸೀ ಸೈಡ್, ಮುಕ್ಕಚರಿ, ಉಳ್ಳಾಲ, ಮಂಗಳೂರು. 2. ಮೊಹಮ್ಮದ್ ಮನ್ಸೂರ್ @ ಬೋಳಿಯಾರು ಮನ್ಸೂರು(30), ವಾಸ: ಕಾಫಿಕಾಡ್ ಹೌಸ್, ಜುಮ್ಮಾ ಮಸೀದಿಯ ಬಳಿ, ಬೋಲಿಯಾರ್, ಉಳ್ಳಾಲ ತಾಲೂಕು. 3. ಮೊಹಮ್ಮದ್ ನೌಷಾದ್(30), ವಾಸ:ಗ್ರಾಮ ಚಾವಡಿ ಬಳಿ, ಬದ್ರಿಯಾ ನಗರ, ಮಲಾರ, ಕೊಣಾಜೆ, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಮಾರಾಕಾಯುಧಗಳಾದ ತಲವಾರು-1, ಚೂರಿ-1, ಮೊಬೈಲ್ ಫೋನುಗಳು-3 ಹಾಗೂ KL -60-R-9755 ಜೀಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 25,90,000/- ಆಗಬಹುದು. ಆರೋಪಿಗಳ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಮುಹಮ್ಮದ್ ಸಮೀರ್ ಅಲಿ @ ಕಡಪರ ಸಮೀರ್ ಎಂಬಾತನು ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಇಲ್ಯಾಸ್ ಕೊಲೆ ಪ್ರಕರಣ, ಫಳ್ನೀರ್ ನ ಶಾಪ್ ವೊಂದರಲ್ಲಿ ನಡೆದ ಶೂಟ್ಔಟ್ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಜೀವ ಬೆದರಿಕೆ ಪ್ರಕರಣ ಹೀಗೆ ಒಟ್ಟು 7 ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ.
ಇನ್ನೋರ್ವ ಆರೋಪಿ ಮೊಹಮ್ಮದ್ ಮನ್ಸೂರ್ @ ಬೋಳಿಯಾರ್ ಮನ್ಸೂರ್ ಎಂಬಾತನ ವಿರುದ್ಧ ಈ ಹಿಂದೆ ಕೊಣಾಜೆ ಠಾಣೆಯಲ್ಲಿ ದರೋಡೆ, ಹಲ್ಲೆ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾದ ಫಳ್ನೀರ್ ಶೂಟ್ಔಟ್ ಪ್ರಕರಣ, ಹಾಗೂ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಭಾಗಿರುತ್ತಾನೆ. ಆರೋಫಿ ಮೊಹಮ್ಮದ್ ನೌಷದ್ ಎಂಬಾತನು ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ಭಾಗಿರುತ್ತಾನೆ.
ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ಸುದೀಪ್ ಎಂ ವಿ, ಶರಣಪ್ಪ ಎಸ್ ಭಂಡಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.




