July 4, 2026

ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ

0
image_editor_output_image1587297385-1717962309047.jpg

ಮುಡಿಪು: ಮುಡಿಪು ಸಮೀಪದ ಬೋಳಿಯಾರು ಬಳಿ ತಂಡವೊಂದು ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ರವಿವಾರ ರಾತ್ರಿ ವರದಿಯಾಗಿದೆ.

ಬೋಳಿಯಾರು ನಿವಾಸಿಗಳಾದ ಹರೀಶ್, ನಂದ ಕುಮಾರ್ ಗಾಯಾಳುಗಳಾಗಿದ್ದು, ಗಾಯಾಳುಗಳನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿರುವುದಾಗಿ ವರದಿಯಾಗಿದೆ.

ಮೋದಿ ಪದಗ್ರಹಣದ ವಿಜಯೋತ್ಸವ ಬೋಳಿಯಾರ್ ನಲ್ಲಿ ನಡೆದಿದ್ದು, ವಿಜಯೋತ್ಸವ ಮುಗಿಸಿ ಮನೆಗೆ ಮರಳುವ ಸಂದರ್ಭ ಬೋಳಿಯಾರ್ ಬಾರ್ ಮುಂಭಾಗದಲ್ಲಿ ತಂಡವೊಂದು ಇಬ್ಬರನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!