March 24, 2026

ಬೈಕ್ ಮೇಲೆ ಉರುಳಿ ಬಿದ್ದ ಮರ: ಓರ್ವ ಸಾವು, ಇಬ್ಬರು ಗಂಭೀರ

0
image_editor_output_image558073923-1717998406093.jpg

ಬೆಳಗಾವಿ: ಭಾರೀ ಮಳೆಯ ಪರಿಣಾಮ ಬೈಕ್ ಮೇಲೆ ಮರವೊಂದು ಉರುಳಿ ಬಿದ್ದು ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿಯ ಬೆಳಲಳಗುಂದಿ ಗ್ರಾಮದಲ್ಲಿ ನಡೆದಿದೆ.

ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿಯಾಗಿದ್ದು, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಂಭೀರ ಗಾಯಗೊಂಡವರಾಗಿದ್ದಾರೆ.

ಮೂವರು ಒಂದೇ ಬೈಕ್‍ನಲ್ಲಿ ಬೆಳಗಾವಿಗೆ ತೆರಳುತ್ತಿದ್ದರು. ಈ ವೇಳೆ ಧಾರಾಕಾವಾಗಿ ಸುರಿದ ಮಳೆಯ ಪರಿಣಾಮ ಬೈಕ್ ಮೇಲೆ ಮರ ಉರುಳಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!