December 15, 2025

ಯುವಕನನ್ನು ಗುಂಡಿಕ್ಕಿ ಹತ್ಯೆ

0
image_editor_output_image579583966-1718006446240.jpg

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಯುವಕನನ್ನು ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದ್ದು, ಇವರು ಪಂಜಾಬ್‌ ಮೂದವರು.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸರ್ರೆಯ ಮನ್ವಿರ್ ಬಸ್ರಾಮ್ (23), ಸಾಹಿಬ್ ಬಸ್ರಾ (20), ಹರ್ಕಿರತ್ ಜುಟ್ಟಿ (23 ) ಮತ್ತು ಒಂಟಾರಿಯೊದ ಕೆಲೋನ್ ಫ್ರಾಂಕೋಯಿಸ್ ( 20 ) ಎಂದು ಗುರುತಿಸಲಾಗಿದೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾಪ್ರಾಂತ್ಯದ ಸರ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಗುಂಡಿನ ದಾಳಿಯ ಸಂಬಂಧ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಈ ಸಂದರ್ಭದಲ್ಲಿ ಯುವರಾಜ್ ಗೋಯಲ್ ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!