ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ರೂ. ಬೆಟ್ಟಿಂಗ್: ಕಾಂಗ್ರೆಸ್ ಕಾರ್ಯಕರ್ತ ಆತ್ಮಹತ್ಯೆ
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನೊಬ್ಬ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪರ ಕೋಟಿ ಕೋಟಿ ಹಣ ಬೆಟ್ಟಿಂಗ್ ಕಟ್ಟಿ, ಸಾಲದ ಸುಳಿಗೆ ಸಿಕ್ಕು ನೇಣಿಗೆ ಶರಣಾದ ಘಟನೆ ಬಿಡದಿಯಲ್ಲಿ ನಡೆದಿದೆ.
ರಾಮನಗರ ತಾಲೂಕಿನ ಕೆಂಚನಕುಪ್ಪೆ ಗ್ರಾಮದ ಶಿವರಾಜು (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಶಿವರಾಜು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಾಗಿ 1 ಕೋಟಿ ರೂ.ಗೂ ಹೆಚ್ಚಿನ ಹಣವನ್ನು ಬೆಟ್ಟಿಂಗ್ ಕಟ್ಟಿ ಕಳೆದುಕೊಂಡಿದ್ದರು. ಕಾಂಗ್ರೆಸ್‍ಗೆ ಸೋಲಾದ ಹಿನ್ನೆಲೆ, ಅವರು ತೀವ್ರ ಸಾಲದ ಸುಳಿಗೆ ಸಿಲುಕಿದ್ದಾರೆ. ಇದರಿಂದ ಬೇಸತ್ತು ಬಿಡದಿಯ ಲಾಡ್ಜ್ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಐದಾರು ಲಾರಿಗಳ ಮಾಲೀಕರಾಗಿದ್ದರು ಎಂದು ತಿಳಿದು ಬಂದಿದೆ.