ಚಿಕ್ಕಮಗಳೂರು: ಜಲಪಾತದಲ್ಲಿ ಸೆಲ್ಫಿ ಕ್ಲಿಕ್ಕಿಸುವಾಗ ಜಾರಿ ಬಿದ್ದು ಯುವಕ ಸಾವು
ಚಿಕ್ಕಮಗಳೂರು: ತರೀಕೆರೆಯ ಹೆಬ್ಬೆ ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತನನ್ನು ಹೈದರಾಬಾದ್ ಮೂಲದ ಶ್ರವಣ್ (25) ಎಂದು ಗುರುತಿಸಲಾಗಿದೆ.
ಮೃತ ಶ್ರವಣ್ ತನ್ನ ಸ್ನೇಹಿತನ ಜೊತೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಕಲ್ಲತ್ತಿಗಿರಿ, ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಬಂದಿದ್ದ. ಇಬ್ಬರೂ ಸೋಮವಾರ ಹೆಬ್ಬೆ ಜಲಪಾತಕ್ಕೆ ಭೇಟಿ ನೀಡಿದ್ದರು.