June 14, 2024

ಕಾಫು: ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆ

0

ಕಾಫು: ಪ್ರೀತಮ್ ರವರು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಯುವಕ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ.

ಪ್ರೀತಮ್ ರವರಿಗೆ ಸುಮಾರು 4 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಕಂಕನಾಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು.

ದಿನಾಂಕ ಜೂನ್ 7 ರಂದು ಬೆಳಿಗ್ಗೆ 7:00 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರಿಗೂ ಹೇಳದೆ ಮನೆಯಿಂದ ನಡೆದುಕೊಂಡು ಹೋದವರು. ಈ ವರೆಗೂ ಮನೆಗೆ ಬಾರದೇ ಇದ್ದು, ಕಾಣೆಯಾದ ಪ್ರೀತಮ್ ಅಮೀನ್ ನನ್ನು ಸ್ನೇಹಿತರುಗಳಲ್ಲಿ, ಸಂಬಂಧಿಕರುಗಳಲ್ಲಿ ಹುಡುಕಾಡಿದ್ದು, ಎಲ್ಲಿಯೂ ಪತ್ತೆಯಾಗದ ಕಾಣೆಯಾಗಿರುವುದಾಗಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 77/2024 ಕಲಂ: ಗಂಡಸು ಕಾಣೆ ಯಂತೆ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!