ಸುಳ್ಯ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ CNG ತುಂಬಿದ್ದ ಲಾರಿ ಪಲ್ಟಿ
ಸುಳ್ಯ: ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್‌ಜಿ) ತುಂಬಿದ್ದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕನಕಮಜಲು ಬಳಿಯ ಸುಣ್ಣಮಜಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಸಂಜೆ ಪಲ್ಟಿಯಾಗಿದೆ.
ಲಾರಿಯಲ್ಲಿದ್ದ ಸಿಲಿಂಡರ್‌ಗಳಿಂದ ಸಿಎನ್‌ಜಿ ಸೋರಿಕೆಯಾಗಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಕೆಲಕಾಲ ಅಸ್ತವ್ಯಸ್ತವಾಯಿತು.
ಲಾರಿಯು ಮಡಿಕೇರಿ ಕಡೆಯಿಂದ ಮಂಗಳೂರಿನ ಕಡೆಗೆ ಸಿಎನ್‌ಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿತ್ತು. ಜೋರಾಗಿ ಮಳೆ ಸುರಿಯುತ್ತಿದ್ದುದರಿಂದ ಲಾರಿಯು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿತ್ತು. ಸ್ಥಳಕ್ಕೆ ಧಾವಿಸಿದ ಸುಳ್ಯ ಅಗ್ನಿಶಾಮಕ ದಳದವರು ಹೆಚ್ಚಿನ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು