ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ: ಪ್ರಚೋದನಾಕಾರಿ ಘೋಷಣೆಯೇ ಕಾರಣ: ಅನುಪಮ್ ಅಗರ್‌ವಾಲ್
ಮಂಗಳೂರು: ಕಳೆದ ರವಿವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರಿನಲ್ಲಿ ವಿಜಯೋತ್ಸವ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆಗೆ ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಮೆರವಣಿಗೆ ಮುಗಿಸಿ ಭಾರತ್ ಮಾತಾ ಕಿ ಜೈ ಘೋಷಣೆ ಮಾಡಿರುವುದು ಹೌದು. ಆದರೆ ಇದರಿಂದ ಪ್ರಚೋದನೆಗೊಂಡಿಲ್ಲ. ಬದಲಾಗಿ ಇದಕ್ಕೂ ಮೊದಲು ಮೆರವಣಿಗೆಯಲ್ಲಿ ಆಟೋ ನಿಲ್ದಾಣದ ಸಮೀಪ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದಾರೆ ಎಂದು ಮಾಹಿತಿ ನೀಡಿದರು.
ಚೂರಿ ಇರಿದ ಪ್ರಕರಣದಲ್ಲಿಒಟ್ಟು 20 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಲಾಗಿದೆ. ಚೂರಿ ಇರಿದವರಲ್ಲಿ ಓರ್ವ ರೌಡಿಶೀಟರ್ ಕೂಡ ಸೇರಿದ್ದಾನೆ. ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ದವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.





